ರೈತರು, ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳನ್ನು ಅರಣ್ಯೀಕರಣ ಕಾರ್ಯಕ್ರಮರ್ಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಪ್ರೇರೇಪಿಸುವ ಹಾಗೂ ಅವರ ಸಹಕಾರವನ್ನು ಪಡೆಯುವ ದೃಷ್ಟಿಯಿಂದ ಸಾರ್ವಜನಿಕ ಸಹಬಾಗಿತ್ವದ ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆ ಎಂಬ ಹೊಸ ಯೋಜನೆಯನ್ನು 2011-12ನೇ ಸಾಲಿನಿಂದ ಪ್ರಾರಂಭಿಸಲಾಗಿದೆ. ಈ ಕಾರ್ಯಕ್ರಮದ ಅನ್ವಯ ರೈತರು, ಸಾರ್ವಜನಿಕರು ರಿಯಾಯಿತಿ ದರದಲ್ಲಿ ಹತ್ತಿರದ ಸಸ್ಯಕ್ಷೇತ್ರಗಳಿಂದ ಸಸಿಗಳನ್ನು ಪಡೆದು ಅವುಗಳನ್ನು ತಮ್ಮ ಜಮೀನಿನಲ್ಲಿ ನೆಟ್ಟು ಪೋಷಿಸಿದರೆ ಪ್ರತಿ ಬದುಕುಳಿದ ಸಸಿಗೆ ಮೊದಲನೇ ವರ್ಷದ ಅಂತ್ಯದಲ್ಲಿ ರೂ. 35/- ಗಳನ್ನು ಹಾಗೂ ಎರಡನೇ ಮತ್ತು ಮೂರನೇ ವರ್ಷದ ಅಂತ್ಯದಲ್ಲಿ ಕ್ರಮವಾಗಿ ರೂ. 40/- ಹಾಗೂ ರೂ. 50/- ಹೀಗೆ ಒಟ್ಟು ರೂ. 125/- ಗಳನ್ನು ಪ್ರೋತ್ಸಾಹ ಧನವನ್ನಾಗಿ ಪಾವತಿಸಲಾಗುತ್ತದೆ. ಈ ರೀತಿ ಪಾವತಿಸುತ್ತಿರುವ ಪ್ರೋತ್ಸಾಹ ಧನದಿಂದ ರೈತರು ಸಸಿಗಳನ್ನು ಪಡೆಯಲು ಹಾಗೂ ನೆಡಲು ಖರ್ಚು ಮಾಡುವ ಹಣವನ್ನು ತುಂಬಿಕೊಳ್ಳಬಹುದಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಸಸಿಸಗಳನ್ನು ನೆಟ್ಟು ಬೆಳಸಿದ್ದಲ್ಲಿ ಗಣನೀಯವಾಗಿ ಪ್ರೋತ್ಸಾಹ ಧನ ಪಡೆಯಬಹುದಾಗಿದೆ. ಪ್ರೋತ್ಸಾಹ ಧನ ಪಡಿಯುದಲ್ಲದೇ ರೈತರು ಮರಗಳಿಂದ ಸಿಗುವಂತಹ ಹಣ್ಣುಗಳು, ಬೀಜ, ಮೇವು, ಉರುವಲು, ಕೋಲು, ಮರಮಟ್ಟು, ಇತ್ಯಾದಿ ಪ್ರಯೋಜನಗಳನ್ನು ಪಡೆಯಲು ಅರ್ಹರಾಗಿದ್ದಾರೆ.