ಅನುಸೂಚಿತ ಜಾತಿ ಉಪ ಹಂಚಿಕೆ ಜನಗಣತಿಯ ಅನುಪಾತಕ್ಕೆ ಅನುಗುಣವಾಗಿ ಸಂಬಂಧಿಸಿದ ಎಲ್ಲಾ ಅಭಿವೃದ್ಧಿ ಕ್ಷೇತ್ರಗಳಿಂದ ಹಣವನ್ನು ಖಾತರಿಪಡಿಸುವ ಮೂಲಕ ಪರಿಶಿಷ್ಟ ಜಾತಿಯ ಜನರಿಗೆ ಪ್ರಯೋಜನಗಳನ್ನು ಒದಗಿಸಲು ಉದ್ದೇಶಿಸಲಾಗಿದೆ. ಅನುಸೂಚಿತ ಜಾತಿ ಉಪ ಹಂಚಿಕೆಯಡಿ ಕರ್ನಾಟಕ ಅರಣ್ಯ ಇಲಾಖೆಯು ಹಲವಾರು ಚಟುವಟಿಕೆಗಳನ್ನು ಜಾರಿಗೊಳಿಸುತ್ತದೆ, ಇದು ಪರಿಶಿಷ್ಟ ಜಾತಿ ಕುಟುಂಬಗಳನ್ನು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಉನ್ನತೀಕರಿಸುವುದಕ್ಕಾಗಿ ಹಾಗೂ ಅರಣ್ಯದ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಈ ಚಟುವಟಿಕೆಗಳಲ್ಲಿ ಎಲ್‌ಪಿಜಿ ಸಂಪರ್ಕಗಳನ್ನು ಒದಗಿಸುವುದು, ಜೈವಿಕ ಅನಿಲ ಸ್ಥಾವರಗಳ ಸ್ಥಾಪನೆ, ಸೋಲಾರ್ ವಾಟರ್ ಹೀಟರ್, ಸೋಲಾರ್ ದೀಪಗಳು, ಜೇನು ಸಾಕಾಣಿಕೆ ಪೆಟ್ಟಿಗೆ ವಿತರಣೆ ಮತ್ತು ಸರಳ ಒಲೆ ಮುಂತಾದ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಅಲ್ಲದೆ, ಪರಿಶಿಷ್ಟ ಜಾತಿ ಕಾಲೋನಿಗಳನ್ನು ಸಂಪರ್ಕಿಸುವ ರಸ್ತೆಬದಿಗಳಲ್ಲಿ ನೆಡುತೋಪು ನಿರ್ಮಾಣ ಮಾಡುವುದು.

ಪದೇಪದೆ ಕೇಳಲಾಗುವ ಪ್ರಶ್ನೆಗಳು (ಎಫ್‌ಎಕ್ಯೂ) ನೋಡಿ

  • ಅನುಸೂಚಿತ ಜಾತಿಗಳ ಉಪಹಂಚಿಕೆ ಎಂದರೇನು?

    ಸಾಮಾನ್ಯ ಜನಸಂಖ್ಯೆಯ ರಾಜ್ಯ ಸರಾಸರಿಗೆ ಎದುರಾಗಿ ಅನುಸೂಚಿತ ಜಾತಿಗಳ ಅಭಿವೃದ್ಧಿ ಮಟ್ಟದಲ್ಲಿನ ಅಂತರವನ್ನು ಕಡಿಮೆಗೊಳಿಸಲು ಹಾಗೂ ಸದರಿ ಜನಾಂಗದವರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದಿಂದ ಜನಗಣತಿ ಆಧಾರದ ಮೇಲೆ ಹಂಚಿಕೆ ಮಾಡುವ ಅನುದಾನ.

  • ಈ ಯೋಜನೆಯಡಿ ನೀಡಲಾಗುತ್ತಿರುವ ಸೌಲಭ್ಯಗಳೇನು?

    ಅರಣ್ಯ ಮತ್ತು ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿಯ ಫಲಾನುಭವಿಗಳನ್ನು ನಿಯಮಾನುಸಾರ ಗುರುತಿಸಿ, ಎಲ್.ಪಿ.ಜಿ. ಸಂಪರ್ಕ, ಸಿಲಿಂಡರ್ ರೀಫಿಲ್ಲಿಂಗ್, ಜೈವಿಕ ಅನಿಲ ಸ್ಥಾವರಗಳ ಸ್ಥಾಪನೆ, ಸೋಲಾರ್ ವಾಟರ್ ಹೀಟರ್, ಸೋಲಾರ್ ದೀಪಗಳು, ಜೇನುಸಾಕಾಣಿಕೆ ಪೆಟ್ಟಿಗೆ ವಿತರಣೆ ಮತ್ತು ಸರಳ ಒಲೆ ಮುಂತಾದ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ.